ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ನ ೨೦೨೫-೨೬ ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.4 ರಂದು ಬೆಳಿಗ್ಗೆ ಕೆದಂಬಾಡಿ ಗ್ರಾಮ ಪಂಚಾಯತಿನ ಸಭಾಂಗಣದಲ್ಲಿ ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮಾರ್ಗದರ್ಶಿ ಅಧಿಕಾರಿಯಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪುತ್ತೂರು ಇದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ಸಭೆ ನಡೆಸಿಕೊಡಲಿದ್ದಾರೆ. ಗ್ರಾಮ ಸಭೆಗೆ ಗ್ರಾಮದ ಮತದಾರ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರಕಾರದ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸುವಂತೆ ಹಾಗೆ ಗ್ರಾಮದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಮುಳಿಗದ್ದೆ , ಉಪಾಧ್ಯಕ್ಷೆ ಜಯಲಕ್ಷ್ಮಿ ಬಲ್ಲಾಲ್ ಕೆದಂಬಾಡಿಬೀಡು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ,ಪ್ರಭಾರ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.