ಪುತ್ತೂರು: ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಜನ್ಮದಿನೋತ್ಸವ ಗ್ರಾಮೋತ್ಸವ 2025 ಅಂಗವಾಗಿ ಏಕಕಾಲದಲ್ಲಿ 365 ಕಡೆಗಳಲ್ಲಿ ಬೃಹತ್ ಸ್ವಚ್ಛತಾ ಅಭಿಯಾನದ ಸ್ವಚ್ಛತಾ ಕಾರ್ಯಕ್ರಮ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಈಶ್ವರಮಂಗಲ ಶಾಖೆ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಕಾವು ಈಶ್ವರಮಂಗಲ ಇದರ ಸಹಯೋಗದೊಂದಿಗೆ ಆ.3 ರಂದು ಹನುಮಗಿರಿ ದೇವಸ್ಥಾನದ ವಠಾರದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ್ತಮೂಡತ್ತಾಯ, ಧರ್ಮದರ್ಶಿ ಶಿವರಾಮ ಪಿ, ಪ್ರಗತಿಪರ ಕೃಷಿಕ ಮುಂಡ್ಯ ಶ್ರೀ ಕೃಷ್ಣ ಭಟ್, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕ ಮೋನಪ್ಪ ಪೂಜಾರಿ ಕೆರೆಮಾರು, ಈಶ್ವರಮಂಗಲ ಶಾಖಾವ್ಯವಸ್ತಾಪಕಿ ಸುಜಾತ ಹಾಗೂ ಸಿಬ್ಬಂದಿಗಳು, ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಕಾವು ಈಶ್ವರಮಂಗಲ ಪ್ರೇರೇಪಕಿ ಮಾಧವಿ ಆಚಾರ್ಯ ಅಧ್ಯಕ್ಷೆ ವಸಂತಿ ಕಾರ್ಯದರ್ಶಿ ಹರೀಶ್ ಹಾಗೂ ಸ್ವಸಹಾಯ ಸಂಘದ ಸದಸ್ಯರು ಹಾಗೂ ಕ್ಷೇತ್ರದ ಸಿಬ್ಬಂದಿಗಳು ಗ್ರಾಹಕರು ಉಪಸ್ಥಿತರಿದ್ದರು.
ನಿರ್ದೇಶಕರಾದ ಮೋನಪ್ಪ ಪೂಜಾರಿ ಕೆರೆಮಾರು ಸ್ವಾಗತಿಸಿ,ಪ್ರಾಸ್ತಾವಿಕ ಮಾತುಗಳನ್ನಾಡಿ, ಶಾಖಾ ವ್ಯವಸ್ಥಾಪಕರು ನಿರೂಪಿಸಿ, ವಂದಿಸಿದರು