ಉಪ್ಪಿನಂಗಡಿ : ಇಲ್ಲಿನ ಶ್ರೀ ಮಾಧವ ಶಿಶು ಮಂದಿರದ ಆಶ್ರಯದಲ್ಲಿ ನಡೆಸಲಾಗುತ್ತಿರುವ 18ನೇ ವರ್ಷದ ಶ್ರೀ ಕೃಷ್ಣನ ಚಿತ್ರ ಬಿಡಿಸುವ ಸ್ಪರ್ಧೆಯು ಆದಿತ್ಯವಾರದಂದು ಉಪ್ಪಿನಂಗಡಿಯ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ನಡೆಯಿತು.
ಸ್ಪರ್ಧೆಯನ್ನು ಉದ್ಘಾಟಿಸಿದ ಶಿಶು ಮಂದಿರದ ಅಧ್ಯಕ್ಷ ಮನೋಜ್ ಶೆಟ್ಟಿ , ಮಕ್ಕಳಲ್ಲಿನ ಕಲಾ ಪ್ರತಿಭೆಯನ್ನು ಅನಾವರಣಗೊಳಿಸುವ ಸಲುವಾಗಿ ಪ್ರಾರಂಭಿಸಲಾದ ಶ್ರೀ ಕೃಷ್ಣನ ಚಿತ್ರ ಬಿಡಿಸುವ ಸ್ಪರ್ಧೆಯು ನಿರಂತರ ಯುವ ಮನಸ್ಸ್ಸುಗಳ ಸೆಳೆತಕ್ಕೆ ಒಳಗಾಗಿದೆ. ಹಲವು ಚಿತ್ರ ಕಲಾವಿದರು ಹೊರಹೊಮ್ಮಲೂ ಕಾರಣವಾಗಿದೆ ಎಂದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಶು ಮಂದಿರದ ಉಪಾಧ್ಯಕ್ಷೆ ಸುಜಾತ ಕೃಷ್ಣ ಆಚಾರ್ಯ, ಆಡಳಿತ ಮಂಡಳಿಯ ಸದಸ್ಯರಾದ ಕಂಗ್ವೆ ವಿಶ್ವನಾಥ ಶೆಟ್ಟಿ, ಯು ರಾಜೇಶ್ ಪೈ, ದೈಹಿಕ ಶಿಕ್ಷಣ ಶಿಕ್ಷಕ ಗಂಗಾಧರ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಹೆಚ್ ಸುಬ್ರಹ್ಮಣ್ಯ ಶೆಣೈ, ರವೀಂದ್ರ ಆಚಾರ್ಯ , ಮಾಧವ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಶಿಶು ಮಂದಿರದ ಮಾತಾಜಿಗಳಾದ ಚೈತ್ರಾ ಮತ್ತು ಕಾಂತಿಮಣಿ ಕಾರ್ಯಕ್ರಮವನ್ನು ನಿರೂಪಿಸಿದರು.