ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಡಬ ತಾ|ಸಮಿತಿ ರಚನೆ

0

ಅಧ್ಯಕ್ಷ: ಮಾಮಚ್ಚನ್ ಎಂ, ಪ್ರ.ಕಾರ್ಯದರ್ಶಿ:ಬಾಲಕೃಷ್ಣ ಕೆ

ಪುತ್ತೂರು:ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯಲ್ಲಿ ಆ. 1ರಂದು ನಡೆದ ದೈಹಿಕ ಶಿಕ್ಷಣ ಶಿಕ್ಷಕರ ಸಭೆಯಲ್ಲಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಡಬ ತಾಲೂಕು ಸಮಿತಿ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.


ಅಧ್ಯಕ್ಷರಾಗಿ ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್ ಎಂ, ಪ್ರಧಾನ ಕಾರ್ಯದರ್ಶಿಯಾಗಿ ಕಾಣಿಯೂರು ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಕೆ, ಕೋಶಾಧಿಕಾರಿಯಾಗಿ ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಅಬ್ದುಲ್ ಸಮದ್, ಗೌರವಾಧ್ಯಕ್ಷರಾಗಿ ಕೊಣಾಲು ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ, ಕಾರ್ಯಾಧ್ಯಕ್ಷರಾಗಿ ಪಡಬೆಟ್ಟು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕುಶಾಲಪ್ಪ ಗೌಡ, ಹಿರಿಯ ಉಪಾಧ್ಯಕ್ಷರಾಗಿ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕಿ ಲಕ್ಷ್ಮಿ ಕೆ.ಟಿ, ಉಪಾಧ್ಯಕ್ಷರುಗಳಾಗಿ ಆಲಂಕಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಅಬ್ರಹಾಂ, ಕುಂತೂರುಪದವು ಸಂತ ಜಾರ್ಜ್‌ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜೇಶ್, ಸಂಘಟನಾ ಕಾರ್ಯದರ್ಶಿಗಳಾಗಿ ಕೊಣಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ, ಉದನೆ ಸೈಂಟ್ ಆಂಟನಿ ಪ್ರೌಢಶಾಲೆಯ ರಾಜೇಶ್, ಕಡಬ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ಚಂದ್ರ, ಜೊತೆ ಕಾರ್ಯದರ್ಶಿಗಳಾಗಿ ರಾಮಕುಂಜ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪ್ರೇಮ, ಬಂಟ್ರ ಮರ್ದಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸವಿತಾ, ಕ್ರೀಡಾ ಕಾರ್ಯದರ್ಶಿಗಳಾಗಿ ಮರ್ದಾಳ ಸೈಂಟ್ ಮೇರೀಸ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜೇಶ್, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಕಡಬ ಸರಸ್ವತಿ ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮೀಶ, ಪತ್ರಿಕಾ ಕಾರ್ಯದರ್ಶಿಗಳಾಗಿ ನೂಜಿಬಾಳ್ತಿಲ ಬೆಥನಿ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕ ಮಥಾಯಿ ಓ.ಜೆ, ಆಂತರಿಕ ಲೆಕ್ಕ ಪರಿಶೋಧಕರಾಗಿ ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಹ್ಯಾರಿಸ್, ಗೌರವ ಸಲಹೆಗಾರರಾಗಿ ರೆಂಜಿಲಾಡಿ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಬೇಬಿ, ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಲೀಲಾವತಿ, ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಲೋಕೇಶ, ಹಳೇನೇರಂಕಿ ದೈಹಿಕ ಶಿಕ್ಷಣ ಶಿಕ್ಷಕ ರಾಮಣ್ಣಗೌಡ ಆಯ್ಕೆಯಾದರು.


ಆಯ್ಕೆ ಪ್ರಕ್ರಿಯೆಯಲ್ಲಿ ಕಡಬ ತಾಲೂಕಿನ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಹಾಗೆಯೇ ಕಳೆದೆರಡು ವರ್ಷಗಳಲ್ಲಿ ಸಂಘವನ್ನು ಅತ್ಯುತ್ತಮ ರೀತಿಯಲ್ಲಿ ಮುನ್ನಡೆಸಿದ ಅಧ್ಯಕ್ಷರು ಕಾರ್ಯದರ್ಶಿಗಳು ಕೋಶಾಧಿಕಾರಿಗಳು ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here