ಪುತ್ತೂರು: ನವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ ಮತ್ತು ವಿದ್ಯುತ್ ಕಂಬ ಅಳವಡಿಸುವವರ ಕಾರ್ಮಿಕರ ಸಂಘ ಅನುರಾಗ ವಠಾರದ ಇದರ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಸುಮಾರು 60ಕ್ಕೂ ಹೆಚ್ಚು ಸದಸ್ಯರಿಂದ ಬೆಳಗ್ಗಿನಿಂದ ಮಧ್ಯಾಹ್ನದ ತನಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ನವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಮುಕ್ವೆ, ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಹಾಗು ಕಟ್ಟಡ ಕಾರ್ಮಿಕ ಸಂಘದ ಸಲಹೆಗಾರ ಕೆ ಜಯರಾಮ ಕುಲಾಲ್, ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ಆಚಾರ್ಯ, ಕೋಶಾಧಿಕಾರಿ ಈಶ್ವರ ನಾಯ್ಕ, ಉಪಾಧ್ಯಕ್ಷ ವಿಶ್ವನಾಥ ಬೆಳ್ಳಿಪ್ಪಾಡಿ, ಜೊತೆ ಕಾರ್ಯದರ್ಶಿ ಚಿನ್ನಪ್ಪ ಮಚ್ಚಿಮಲೆ ಮತ್ತು ಸದಸ್ಯರು ಉಪಸ್ಥಿತರಿದ್ದರು.