ಫಿಲೋಮಿನಾ ಪ.ಪೂ.ಕಾಲೇಜಿನಲ್ಲಿ ‘ಪ್ರತಿಭಾ- 2025’ ಪ್ರೌಢ ಶಾಲಾ ಮಟ್ಟದ ಸ್ಪರ್ಧೆ

0

ಪುತ್ತೂರು : ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ‘ಪ್ರತಿಭಾ – 2025’ ಕಾರ್ಯಕ್ರಮವು ಆಗಸ್ಟ್ 6ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಲಿದೆ.


 ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ  ಸುಳ್ಯ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೆರಾಲು, ಗೌರವ ಉಪಸ್ಥಿತಿಯಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ ಕೋಸ್ಟಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ಡಾ. ಶ್ರೀ ಪ್ರಕಾಶ್. ಬಿ  ಹಾಗೂ ಕಾಲೇಜಿನ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷರಾದ ದಿವ್ಯಾ ಅನಿಲ್ ರೈ ವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ.ಫಾ. ಲಾರೆನ್ಸ್ ಮಸ್ಕರೇನಸ್ ವಹಿಸಲಿದ್ದಾರೆ. ಅದೇ ರೀತಿ ಸಮಾರೋಪ ಸಮಾರಂಭದಲ್ಲಿ  ಮುಖ್ಯ ಅತಿಥಿಗಳಾಗಿ ಕೊಡಂಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕಿಯಾದ ಗೀತಾ ಕುಮಾರಿ ಎನ್ ವಿ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here