ವಿಟ್ಲ: ಒಡಿಯೂರು ಶ್ರಿ ಗುರುದೇವಾನಂದ ಸ್ವಾಮೀಜಿಯವರ ಜನ್ಮ ದಿನೋತ್ಸವ – ಗ್ರಾಮೋತ್ಸವ 2025ರ ಅಂಗವಾಗಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಪುತ್ತೂರು ಶಾಖೆ ಹಾಗೂ ಬೊಂಡಾಲ ಹಿ.ಪ್ರಾ ಶಾಲೆಯ ಸಹಯೋಗದೊಂದಿಗೆ ಆ.೩ರಂದು ಸ್ವಚ್ಛತಾ ಕಾರ್ಯಕ್ರಮವು ಬೊಂಡಾಲ ಹಿ.ಪ್ರಾ. ಶಾಲೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರು, ಒಡಿಯೂರು ಶ್ರೀ ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ದೇವಪ್ಪ ನಾಯ್ಕ್ ಬೆಟ್ಟಂಪಾಡಿರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಪುತ್ತೂರು ಶಾಖೆಯ ವ್ಯವಸ್ಥಾಪಕರಾದ ಪವಿತ್ರಾ ಪ್ರಸಾದ್, ಎಸ್.ಕೆ.ಜಿ ಗೋಲ್ಡ್ಸ್ಮಿತ್ ಕೋ ಅಪರೇಟಿವ್ ನ ಮುಡಿಪು ಶಾಖಾ ವ್ಯವಸ್ಥಾಪಕರಾದ ಪ್ರಸಾದ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜನಾರ್ದನ ಕುಲಾಲ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿನೋದ್ ಶೆಟ್ಟಿ ಬೊಂಡಾಲ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ರೇಖಾ ಸಿ.ಎಚ್, ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು. ವಿನೋದ್ ಶೆಟ್ಟಿ ಬೊಂಡಾಲ ವಂದಿಸಿದರು.