ಪುತ್ತೂರು: ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ’ಯುವನಿಧಿ ಯೋಜನೆಗೆ’ ಸಂಬಂಧಿಸಿದಂತೆ ಆ.5ರಂದು ಅರ್ಜಿಗಳ ವಿಲೇವಾರಿ ಶಿಬಿರವು ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಗ್ಯಾರೆಂಟಿ ಯೋಜನಾ ಅನುಷ್ಠಾನ ಸಮಿತಿ ಕಚೇರಿಯಲ್ಲಿ ನಡೆಯಲಿದೆ.
ಪುತ್ತೂರು ತಾಲೂಕು ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ ಗಂಟೆ 10 ರಿಂದ ಮಧ್ಯಾಹ್ನ ಗಂಟೆ 1 ತನಕ ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ನಡೆಯಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.