ನಾಳೆ (ಆ.6): ಬೊಳುವಾರಿನಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ

0

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಮತ್ತು ರೋಟರ್ಯಾಕ್ಟ್ ಕ್ಲಬ್ ಪ್ರಗತಿ ಪ್ಯಾರಾಮೆಡಿಕಲ್ ಇದರ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ ಆ. 6 ರಂದು ಬೊಳುವಾರು ಆಂಜನೇಯ ಮಂದಿರದ ಹತ್ತಿರ, ಯೂನಿಯನ್ ಬ್ಯಾಂಕ್ ಎದುರುಗಡೆಯ ಫಿಯೋನಿಕ್ಸ್ ಕ್ಲಿನಿಕ್ ನಲ್ಲಿ ನಡೆಯಲಿದೆ.

ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ ಡಾ. ಶ್ರೀಪತಿ ರಾವ್ ಮತ್ತು ರೋಟರಿ ಕ್ಲಬ್ ಅಧ್ಯಕ್ಷ ಡಾ. ಶ್ರೀಪ್ರಕಾಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ, ಉಚಿತ ಬಿಪಿ ಶುಗರ್ ಪರೀಕ್ಷೆ, ಉಚಿತ ಔಷಧಿ ವಿತರಣೆ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಮೊದಲು ನೋಂದಾಯಿಸಿದ 50 ಜನರಿಗೆ ಮಾತ್ರ ಈ ಶಿಬಿರದಲ್ಲಿ ಅವಕಾಶವಿರುವುದರಿಂದ ನೋಂದಣಿಗಾಗಿ 9448474421 ಸಂಪರ್ಕಿಸಬಹುದಾಗಿದೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here