ಆ.8: ನೆಲ್ಯಾಡಿಯಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

0

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನೆಲ್ಯಾಡಿ ಇದರ ಸಹಯೋಗದಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ ಆ.8ರಂದು ನೆಲ್ಯಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶಬರೀಶ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷೆ ಉಷಾ ಅಂಚನ್ ಅವರು ತಿಳಿಸಿದ್ದಾರೆ.


ಬೆಳಿಗ್ಗೆ 10 ರಿಂದ 11ರ ತನಕ ಭಜನಾ ಕಾರ್ಯಕ್ರಮ, ಬೆಳಿಗ್ಗೆ 11ಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜೆ ಪ್ರಾರಂಭವಾಗಲಿದೆ. ಸಭಾ ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಹಾಗೂ ಸದಸ್ಯರು, ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್‌ಕುಮಾರ್ ಸಹಿತ ವಿವಿಧ ಕ್ಷೇತ್ರಗಳ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here