ಮಂಗಳೂರಿನಿಂದ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೆಚ್ಚುವರಿ ವೇಗದೂತ ಬಸ್ ಸೌಕರ್ಯಕ್ಕೆ ಆಗ್ರಹ

0

ಕಡಬ ಇಂಟಕ್ ಯುವ ಘಟಕದ ಅಧ್ಯಕ್ಷ ಅಶ್ಪಾಕ್‌ರವರಿಂದ ಸಿಎಂ, ಸಾರಿಗೆ ಸಚಿವರಿಗೆ ಮನವಿ

ಕಡಬ: ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೆಚ್ಚುವರಿ ವೇಗದೂತ ಬಸ್ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಇಂಟಕ್ ಯುವ ಘಟಕದ ಕಡಬ ತಾಲೂಕು ಅಧ್ಯಕ್ಷ ಮಹಮ್ಮದ್ ಅಶ್ಪಾಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ.

ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡುತ್ತಿದ್ದು ಪ್ರಸ್ತುತ ಕಡಿಮೆ ಸಂಖ್ಯೆಯಲ್ಲಿ ಬಸ್ಸಿನ ವ್ಯವಸ್ಥೆ ಇರುವ ಕಾರಣ ಭಕ್ತಾದಿಗಳಿಗೆ, ಆ ಭಾಗದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ, ಹಿರಿಯ ನಾಗರಿಕರಿಗೆ, ರೋಗಿಗಳಿಗೆ ತೊಂದರೆಯುಂಟಾಗುತ್ತಿದೆ, ಈ ಹಿನ್ನೆಲೆಯಲ್ಲಿ ಅಲ್ಲಿಗೆ ಹೆಚ್ಚಿನ ವೇಗದೂತ ಬಸ್ ಸೌಕರ್ಯ ಕಲ್ಪಿಸಲು ವ್ಯವಸ್ಥೆ ಮಾಡಲು ತಾವು ಮಂಗಳೂರು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಆದೇಶ ನೀಡುವಂತೆ ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here