ಪುತ್ತೂರು: ಒಡಿಯೂರು ಶ್ರೀಗಳ 64 ನೇ ಜನ್ಮ ದಿನೋತ್ಸವದ ಪ್ರಯುಕ್ತ ಒಡಿಯೂರು ವಿಕಾಸ ವಾಹಿನಿ, ಸ್ವಸಹಾಯ ಸಂಘದ ಸದಸ್ಯರಿಂದ ಕೆದಂಬಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಆ.3 ರಂದು ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರು ವಲಯ ಸಂಯೋಜಕಿ ಶಶಿ ಡಿ, ಕೆದಂಬಾಡಿ ಘಟ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಸಾಗು, ಉಪಾಧ್ಯಕ್ಷ ದಿನೇಶ್ ರೈ, ಪಂಚಾಯತ್ ಅಧ್ಯಕ್ಷೆ ಸುಜಾತ ಮುಳಿಗದ್ದೆ, ಸಿಬ್ಬಂದಿ ವಿದ್ಯಾಪ್ರಸಾಧ್ ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.