ಪುತ್ತೂರು: ಶ್ರೀ ಒಡಿಯೂರು ಗುರುದೇವಾನಂದ ಸ್ವಾಮಿಜಿ ಜನ್ಮದಿನೋತ್ಸವ-ಗ್ರಾಮೋತ್ಸವ 2025 ರ ಪ್ರಯುಕ್ತ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ, ವಿಟ್ಲ ಶಾಖೆ,ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ,ರಾಷ್ಟ್ರೀಯ ಸೇವಾ ಘಟಕ ವಿಠಲ ಪದವಿಪೂರ್ವ ಕಾಲೇಜ್ ವಿಟ್ಲ ಇದರ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನ ಸಮುದಾಯ ಆರೋಗ್ಯ ಕೇಂದ್ರದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಿಠಲ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಅಣ್ಣಪ್ಪ ಶಾಸ್ತಾನ ಉದ್ಘಾಟಿಸಿ ಮಾತನಾಡಿ, ಪರಿಸರದ ಸ್ವಚ್ಛತೆಯೊಂದಿಗೆ ಸಮಾಜದ ಸ್ವಚ್ಛತೆ ಹಾಗೂ ಆರೋಗ್ಯದ ಸ್ವಚ್ಛತೆ ಬಹಳ ಮುಖ್ಯ ಎಂದು ನುಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ ಹಾಗೂ ಅತಿಥಿಯಾಗಿ ಡಾಕ್ಟರ್ ತ್ರಿಶಾ ಶೆಟ್ಟಿ ಅವರು ಮಾತನಾಡಿದರು.

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕ ಗಣಪತಿ ಭಟ್ ಸೇರಾಜೆ ರವರು ಪ್ರಸ್ತಾವಿಕವಾಗಿ ಮಾತನಾಡಿದರು.ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಶಾಖಾ ವ್ಯವಸ್ಥಾಪಕಿ ರಾಜೀವಿ ಸ್ವಾಗತಿಸಿದರು. ಸಿಬ್ಬಂದಿಯಾದ ಶ್ರದ್ಧಾ ಪ್ರಾರ್ಥನೆ ಮಾಡಿದರು. ಸ್ವಾತಿ ವಂದಿಸಿದರು. ರಾಷ್ಟ್ರೀಯ ಸೇವಾ ಘಟಕದ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತರು , ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಇನ್ನಿತರರನ್ನು ಸೇರಿ ಒಟ್ಟು 80 ಜನ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.