ಪುತ್ತೂರು: ತಾಲೂಕು ಗ್ಯಾರೇಜ್ ಮಾಲಕರ ಸಂಘ ಇದರ ಆಶ್ರಯದಲ್ಲಿ ಆಟಿಡ್ ಒಂಜಿ ದಿನ ಆ.3 ರಂದು ರೋಟರಿ ಮನೀಷಾ ಸಭಾಂಗಣದಲ್ಲಿ ನಡೆಯಿತು. ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷರಾದ ಶಶಿಧರ್ ಕಿನ್ನಿಮಜಲುರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಸಂಘದ ಕಾನೂನು ಸಲಹೆಗಾರರಾದ ನ್ಯಾಯವಾದಿ ಮಹೇಶ್ ಕೆ ಸವಣೂರುರವರು ಕಾನೂನು ಮಾಹಿತಿಯನ್ನು ನೀಡಿದರು. ಗ್ಯಾರೇಜು ಮಾಲಕರ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ಧನ್ ಅತ್ತಾವರ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಸಂಘದ ಅಧ್ಯಕ್ಷ ಶರತ್ ಕುಮಾರ್ ರೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕೋಶಾಧಿಕಾರಿ ಪ್ರಕಾಶ್ ರೈ ಸಹಕರಿಸಿದರು. ಕಾರ್ಯದರ್ಶಿ ದಿನೇಶ್ ಕಬಕ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಮನೆಯಲ್ಲಿ ತಯಾರಿಸಿದ ತಿಂಡಿ ತಿನಿಸುಗಳನ್ನು ತಂದು ಕುಟುಂಬ ಸಮ್ಮಿಲನ ಹಾಗೂ ಸಹ ಭೋಜನ ನಡೆಸಿದರು.