ಕಡಬ: ಒಡಿಯೂರು ಶ್ರೀ ಜನ್ಮದಿನೋತ್ಸವ ಪ್ರಯುಕ್ತ ಸ್ವಚ್ಛತೆ

0

ಕಡಬ: ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಕಡಬ, ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ ಕಡಬ ಶಾಖೆ ಹಾಗೂ ಕಡಬದ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ಸಹಕಾರದೊಂದಿಗೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ-ಗ್ರಾಮೋತ್ಸವ-2025 ಕಾರ್ಯಕ್ರಮದ ಪ್ರಯುಕ್ತ ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಜರಗಿತು.


ಮುಖ್ಯಅತಿಥಿಯಾಗಿ ಆಗಮಿಸಿದ್ದ ಕಡಬ ಆರಕ್ಷಕ ಠಾಣೆಯ ಉಪನಿರೀಕ್ಷಕ ಅಭಿನಂದನ್ ಎಂ.ಎಸ್. ಅವರು ಶ್ರೀಗಳ ಜನ್ಮದಿನೋತ್ಸವವನ್ನು ಗ್ರಾಮೋತ್ಸವ ಎನ್ನುವ ಹೆಸರಿನಲ್ಲಿ ಸಮಾಜಮುಖಿಯಾಗಿ ನಡೆಸುತ್ತಿರುವುದು ಶ್ಲಾಘನಾರ್ಹ ಎಂದರು. ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಕರ್ಕೇರ ಪೆಲತ್ತೋಡಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕಡಬದ ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ವಿಶ್ವನಾಥ ರೈ ಪೆರ್ಲ ಹಾಗೂ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ಅಧ್ಯಕ್ಷ ಸೋಮಪ್ಪ ನಾಕ್ ಕಡಬ ಅವರು ಕಾರ್ಯಕ್ರಮದ ಕುರಿತು ಮಾತನಾಡಿದರು. ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ ಕಡಬ ಶಾಖೆಯ ವ್ಯವಸ್ಥಾಪಕ ನಾಗರಾಜ ಶೆಟ್ಟಿ, ಕಡಬ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹರೀಶ್ ಉಂಡಿಲ, ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಅರ್ಚಕ ಪ್ರಶಾಂತ ಕೆದಿಲಾಯ, ಕಡಬದ ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಕಾರ್ಯದರ್ಶಿ ಸೀತಾರಾಮ ಗೌಡ ಎ., ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಅಶೋಕ್ ರೈ ವಜ್ರಪಾಣಿ, ದಾಮೋದರ ನಾಯಕ್ ಮುಂತಾದವರು ಉಪಸ್ಥಿತರಿದ್ದರು. ಕಡಬದ ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಉಪಾಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ಕಾರ್ಯದರ್ಶಿ ಮನೋಹರ ರೈ ಬೆದ್ರಾಜೆ ವಂದಿಸಿದರು.

LEAVE A REPLY

Please enter your comment!
Please enter your name here