ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಫಲಿತಾಂಶ ಪ್ರಕಟ

0

ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ವಿಶೇಷ ಸಾಧನೆ

ಪುತ್ತೂರು: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಕಾನೂನು ಪದವಿಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದಾರೆ.

ಜೂನ್ ನಲ್ಲಿ ನಡೆದ ಪರೀಕ್ಷೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಅಂತಿಮ ವರ್ಷದ ಬಿ.ಎ. ಎಲ್.ಎಲ್.ಬಿ. ಪದವಿಯ ಹಲವು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅದೇ ರೀತಿ ಅಂತಿಮ ವರ್ಷದ ಎಲ್.ಎಲ್.ಬಿ. ಪದವಿಯ ಹಲವು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯನ್ನು ಪಡೆದುಕೊಂಡು ಉತ್ತಿರ್ಣರಾಗಿದ್ದಾರೆ. ಅದರಲ್ಲಿ ಅಂತಿಮ ವರ್ಷದ ಬಿ.ಎ. ಎಲ್.ಎಲ್.ಬಿ. ಪದವಿಯ ಮೈತ್ರಿ ಎಂ. ಹಾಗೂ ಅಂತಿಮ ವರ್ಷದ ಎಲ್.ಎಲ್.ಬಿ. ಪದವಿಯ ಸ್ಫೂರ್ತಿ ಪಿ.ಇ. ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣರಾಗುವ ಮೂಲಕ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗದ ಕಾನೂನು ಮಹಾವಿದ್ಯಾಲಯ ಗಳಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯವು ಅತ್ಯುತ್ತಮವಾದ ಫಲಿತಾಂಶವನ್ನು ದಾಖಲಿಸುತ್ತಿದೆ ಎಂದು ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ.ಕೆ. ರವೀಂದ್ರ ಹಾಗೂ ಪ್ರಾಂಶುಪಾಲರಾದ ಅಕ್ಷತಾ ಎ.ಪಿ. ತಿಳಿಸಿದ್ದಾರೆ.

ಕಳೆದ 37 ವರ್ಷಗಳಲ್ಲಿ ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ 14 ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ರ‍್ಯಾಂಕ್‌ ಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಇಲ್ಲಿ ಕಲಿತ ಹಲವಾರು ವಿದ್ಯಾರ್ಥಿಗಳು ಹೈಕೋರ್ಟ್ ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶಾರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಸರಕಾರಿ ವಕೀಲರಾಗಿ, ಸುಪ್ರೀಂ ಕೋರ್ಟ್, ಹೈಕೋರ್ಟ್ ಹಾಗೂ ವಿವಿಧ ಹಂತಗಳ ನ್ಯಾಯಾಲಯದಲ್ಲಿ ನ್ಯಾಯವಾದಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ವಿವಿಧ ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಕಾನೂನು ಸಲಹೆಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದಲ್ಲದೇ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಟ್ರೋಫಿಗಳನ್ನು ತನ್ನದಾಗಿಸಿಕೊಂಡಿದ್ದಾರೆ. ಜೊತೆಗೆ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಗಳಲ್ಲಿ ಭಾಗವಹಿಸಿ, ಹಲವಾರು ಪ್ರಶಸ್ತಿ ಗಳನ್ನು ಪಡೆದುಕೊಂಡು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here