ಧರ್ಮ-ಧರ್ಮಗಳ ನಡುವೆ ವೈಮನಸ್ಸು, ದ್ವೇಷ ಉಂಟುಮಾಡುವ ಸುಳ್ಳು ಮಾಹಿತಿ ಪ್ರಸಾರ – ಎಸ್‌ಡಿಪಿಐ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

0


ಪುತ್ತೂರು: ಬೊಳುವಾರಿನಲ್ಲಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿ ನೈಜತೆಯನ್ನು ಪರಿಶೀಲಿಸದೇ ಸಮಾಜದಲ್ಲಿ ಧರ್ಮಧರ್ಮಗಳ ನಡುವೆ ವೈಮನಸ್ಸು ಮತ್ತು ದ್ವೇಷ ಉಂಟು ಮಾಡುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಫೇಸ್‌ಬುಕ್‌ನಲ್ಲಿ ಪ್ರಸಾರ ಮಾಡಿರುವುದಕ್ಕೆ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜು.4ರಂದು ಬೊಳುವಾರಿನಲ್ಲಿ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಫೇಸ್‌ಬುಕ್‌ ಪೇಜಿನಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಶ್ರಫ್ ಬಾವು ಸದರಿ ಘಟನೆಯ ಬಗ್ಗೆ, ನೈಜತೆಯನ್ನು ಪರಿಶೀಲಿಸದೇ ಸಮಾಜದಲ್ಲಿ ಧರ್ಮಧರ್ಮಗಳ ನಡುವೆ ವೈಮನಸ್ಸು ಹಾಗೂ ದ್ವೇಷ ಉಂಟಾಗುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿರುವ ಬಗ್ಗೆ ಆ.5ರಂದು ಕಂಡುಬಂದ ಹಿನ್ನೆಲೆಯಲ್ಲಿ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 240 ,353(2)ಬಿಎನ್‌ಎಸ್ 2023 ರಂತೆ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here