ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟವು ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚ ಇಲ್ಲಿ ಆಗಸ್ಟ್ 5 ರಂದು ನಡೆಯಿತು.
ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣವರ್ಗದ ಬಾಲಕ ಮತ್ತು ಬಾಲಕಿಯರ ಎರಡು ತಂಡಗಳು ಭಾಗವಹಿಸಿರುತ್ತದೆ. ಬಾಲಕಿಯರ ತಂಡದಲ್ಲಿರುವ ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಕೃತಿ ಎಚ್., ಸಿಂಚನಾ ಎಸ್. ಎಮ್.,ಶೀಲಾ ಎಸ್. ,ಶಷ್ಟಿಕಾ, ದ್ವಿತೀಯ ವಿಜ್ಞಾನ ವಿಭಾಗದ ಶ್ರಾವ್ಯಶ್ರೀ ಕೆ.,ಪ್ರತೀಕ್ಷಾ, ಪ್ರಥಮ ವಾಣಿಜ್ಯ ವಿಭಾಗದ ಸಿಂಚನಾ, ಧನ್ಯಾ, ಯಜ್ಞ ಶ್ರೀ, ಪ್ರಥಮ ವಿಜ್ಞಾನ ವಿಭಾಗದ ಪೂರ್ವಿ ಕೆ.ಜೆ.,ಯಶಸ್ವಿ ನಾಯಕ್, ಪಿ.ಮಾನಸ ಇವರು ಖೋ-ಖೋ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು, ಈ ವಿದ್ಯಾರ್ಥಿಗಳು ಆಗಸ್ಟ್ ೨೨ ಮತ್ತು ೨೩ ರಂದು ಹಾಸನದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು,ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.