ಪುತ್ತೂರು: ಶ್ರೀ ರಾಮ ಮಂದಿರ ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕುಂಬ್ರ ವಲಯ, ಸನ್ಯಾಸಿಗುಡ್ಡೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಲ್ಕನೇ ವರ್ಷದ ಸಾರ್ವಜನಿಕ ಶ್ರೀ ವರ ಮಹಾಲಕ್ಷ್ಮೀ ವೃತ ಪೂಜೆ ಆ.8ರಂದು ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರ ಕೆದಂಬಾಡಿಯಲ್ಲಿ ಜರಗಲಿದೆ. ವೇದಮೂರ್ತಿ ಶ್ರೀ ಕೃಷ್ಣ ಕುಮಾರ ಉಪಾಧ್ಯಾಯ ಪಟ್ಲಮೂಲೆಯವರ ಪೌರೋಹಿತ್ಯದಲ್ಲಿ ಪೂಜಾ ವಿಧಿ ವಿಧಾನಗಳು ನಡೆಯಲಿದೆ.
ಬೆಳಿಗ್ಗೆ 9.30ಕ್ಕೆ ಸಪರಿವಾರ ಶ್ರೀ ರಾಮ ದೇವರಲ್ಲಿ ಪ್ರಾರ್ಥನೆ ನಡೆದು ಬಳಿಕ ಪೂಜೆ ಆರಂಭಗೊಳ್ಳಲಿದೆ. ಮಧ್ಯಾಹ್ನ ಮಹಾ ಮಂಗಳಾರತಿ ನಡೆದು ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ವರ ಮಹಾಲಕ್ಷ್ಮೀ ದೇವಿಯ ಕೃಪೆಗೆ ಹಾಗೇ ಸಪರಿವಾರ ಶ್ರೀರಾಮ ದೇವರ ಕೃಪೆಗೆ ಪಾತ್ರರಾಗುವಂತೆ ಶ್ರೀ ವರ ಮಹಾಲಕ್ಷ್ಮೀ ಪೂಜಾ ಸಮಿತಿ, ಶ್ರೀ ರಾಮ ಮಂದಿರದ ಆಡಳಿತ ಸಮಿತಿ ಮತ್ತು ಭಜನಾ ಸಮಿತಿ, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಕುಂಬ್ರ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ಸನ್ಯಾಸಿಗುಡ್ಡೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸರ್ವ ಸದಸ್ಯರ ಪ್ರಕಟಣೆ ತಿಳಿಸಿದೆ.