ಪುತ್ತೂರು: ವಿಶ್ವಕರ್ಮ ಮಹಿಳಾ ಮಂಡಳಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.8ರಂದು ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ.
ಪುರೋಹಿತ ಅಭಿಷೇಕ ಆಚಾರ್ಯ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಶ್ವಕರ್ಮ ಮಹಿಳಾ ಮಂಡಳಿ ಅಧ್ಯಕ್ಷೆ ಇಂದಿರಾ ಪುರುಷೋತ್ತಮ ಆಚಾರ್ಯ ವಿನಂತಿಸಿದ್ದಾರೆ.