ಆ.8: ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಪುಣಚ: ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಪುಣಚ ಹಾಗೂ ಶ್ರೀ ದೇವಿ ಮಹಿಳಾ ಮಂಡಳಿ ದೇವಿನಗರ ಪುಣಚ ಇವರ ಸಹಭಾಗಿತ್ವದಲ್ಲಿ ನಡೆಯುವ ೨೩ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.8ರಂದು ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿದೆ.

ಬೆಳಿಗ್ಗೆ ವೇದಮೂರ್ತಿ ಸುಬ್ರಾಯ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡು ದೇವಿನಗರ ಶ್ರೀದೇವಿ ಮಹಿಳಾ ಭಜನಾ ಮಂಡಳಿ ಯವರಿಂದ ಭಜನೆ, ಪೂಜಾರಂಭ, ನಂತರ‌ ನಡೆಯುವ ಸಭಾ ಕಾರ್ಯಕ್ರಮಲ್ಲಿ ಪುಣಚ ತೋರಣಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ದಿವ್ಯವಾಣಿ ಕಜೆ ಸಭಾಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಮಹಿಳಾ ಮತ್ತು ಮಕ್ಕಳ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾರದಾ ಕೆ ಭಾಗವಹಿಸಲಿದ್ದಾರೆ. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವರಮಹಾಲಕ್ಕ್ಮೀ ಪೂಜಾ ಸಮಿತಿ ಹಾಗೂ ಶ್ರೀ ದೇವಿ ಮಹಿಳಾ ಮಂಡಳಿಯ ಪ್ರಕಟನೆ ತಿಳಿಸಿದೆ. 

LEAVE A REPLY

Please enter your comment!
Please enter your name here