ವಿವಿಧ ವಿಚಾರಗಳ ಬಗ್ಗೆ ಚರ್ಚೆ, ಇಲಾಖಾ ಅಧಿಕಾರಿಗಳಿಂದ ಮಾಹಿತಿ
ಕಡಬ: ಬಿಳಿನೆಲೆ ಗ್ರಾಮ ಪಂಚಾಯತ್‌ನ 2025-26 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆ.2ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದ ದಿನೇಶ್ ಇವರ ಅಧ್ಯಕ್ಷತೆಯಲ್ಲಿ ಬಿಳಿನೆಲೆ ಗ್ರಾಮ ಪಂಚಾಯತ್ ನಲ್ಲಿ ಜರುಗಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಪಂಚಾಯತ್‌ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕುಶಕುಮಾರ್ ನೋಡೆಲ್ ಅಧಿಕಾರಿಯಾಗಿದ್ದರು. ಸಭೆಯಲ್ಲಿ ಆರೋಗ್ಯ ಇಲಾಖೆ, ವಲಯ ಅರಣ್ಯ ಇಲಾಖೆ. ಶಿಶು ಅಭಿವೃದ್ಧಿ ಇಲಾಖೆ, ತೋಟಗಾರಿಕೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ. ಆರಕ್ಷಕ ಠಾಣೆ, ಪಶು ಇಲಾಖೆ. ಕಂದಾಯ ಇಲಾಖೆ. ಮೆಸ್ಕಾಂ ಇಲಾಖೆ ಅಧಿಕಾರಿಗಳು ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ, ಯೋಜನೆಯಡಿ ಇಂಟರ್ ನ್ಯಾಷನಲ್ ಆರ್ಗನೈಷನ್ ಆಫ್ ಸ್ಟಾಂಡರ್‌ಡ್‌ನೇಷನ್ ಮಾನದಂಡದಡಿ ಪ್ರಮಾಣಿಕರಣವನ್ನು ಅಳವಡಿಸುವ ಯೋಜನೆಯ ಬಗ್ಗೆ ಅಭಿವೃದ್ದಿ ಅಧಿಕಾರಿಯವರು ಮಾಹಿತಿ ನೀಡಿದರು.

ಸಭೆಯಲ್ಲಿ ಬಿಳಿನೆಲೆ ಗ್ರಾಮವನ್ನು ಕಡಬ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ, ರಸ್ತೆ ಬದಿಯಲ್ಲಿ ಮೆಸ್ಕಾಂ ಇಲಾಖೆಯವರು ವಿದ್ಯುತ್ ಕಂಬಗಳನ್ನು ವಾಹನ ಅಪಘಾತವಾಗಿ ಕಂಬ ಮುರಿದಾಗ ವಾಹನದವರಿಂದಲೇ ದಂಡನೆ ಪಡೆದುಕೊಳ್ಳುವ ಬಗ್ಗೆ ವಿರೋಧ, ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ೨೦೨೫ -೨೬ನೇ ಸಾಲಿನ ಗ್ರಾಮ ಸಭೆಯಲ್ಲಿ ನಮ್ಮ ಗ್ರಾಮದ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ಶಿವಶಂಕರ್ ಪಂಚಾಯತ್ ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ, ಸತೀಶ್ ಕಳಿಗೆ, ಮುರಳೀಧರ ಎರ್ಮಾಯಿಲ್, ಭವ್ಯಶ್ರೀ ಕೈಕಂಬ, ಬೇಬಿ ಸಣ್ಣಾರ, ಶಾರದ ಮುಂಗ್ಲಿ ಮಜಲು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ಸ್ವಾಗತಿಸಿ ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದರು.
.