ನಾಳೆ (ಆ.08) ಬೊಳುವಾರು ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

0


ಪುತ್ತೂರು: ಬೊಳುವಾರು ಶ್ರೀ ದುರ್ಗಾ ಪರಮೇಶ್ವರಿ ಉಳ್ಳಾಲ್ತಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಆ.8ರಂದು ಸಂಜೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಅರ್ಚಕರಾದ ವೆ.ಮೂ. ಶ್ರೀಧರ ಭಟ್ ಕಬಕರವರ ನೇತೃತ್ವದಲ್ಲಿ ನಡೆಯಲಿದೆ.

ಸಂಜೆ ಕಲಶ ಪ್ರತಿಷ್ಠೆ, ಲಲಿತಾ ಸಹಸ್ರನಾಮ ಪಠಣ, ಕ್ಷೇತ್ರದ ದುರ್ಗಾಪರಮೇಶ್ವರೀ ಭಜನಾ ಮಂಡಳಿ ವತಿಯಿಂದ ಭಜನೆ, ವೇಣುಗೋಪಾಲ್‌ ಮತ್ತು ಬಳಗದವರಿಂದ ಸ್ಯಾಕ್ಸೋಫೋನ್ ವಾದನ, ರಾತ್ರಿ ವರಮಹಾಲಕ್ಷ್ಮೀಪೂಜೆಯ ಮಂಗಳಾರತಿ, ಶ್ರೀ ದುರ್ಗಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಫಲಾಹಾರ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here