ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ, ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ನಿಡ್ಪಳ್ಳಿ ಇವುಗಳ ಜಂಟಿ ಆಶ್ರಯದಲ್ಲಿ 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಪೂಜೆ ಆ.8 ರಂದು ಬೆಳಿಗ್ಗೆ ಗಂಟೆ 9.30 ರಿಂದ ಪುರೋಹಿತರಾದ ದಿನೇಶ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 9.30ಕ್ಕೆ ಪೂಜೆ ಪ್ರಾರಂಭವಾಗಿ ಮಧ್ಯಾಹ್ನ ಗಂಟೆ 12.00ಕ್ಕೆ ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಪೂಜಾ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.