ಆ.8: ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಪಡುಮಲೆ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ

0

ಬಡಗನ್ನೂರು: ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆ ಇದರ ಆಶ್ರಯದಲ್ಲಿ  ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಪಡುಮಲೆ ಇದರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ಆ.8 ರಂದು ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೆರವೇರಲಿದೆ.

ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ವರಮಹಾಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗುವಂತೆ ಸಮಿತಿ ಅಧ್ಯಕ್ಷೆ ವಾಣಿಶ್ರೀ ಪಡುಮಲೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಬೆಳಿಗ್ಗೆ ಗಂ 8.30 ರಿಂದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ಆರಂಭ, ಮಧ್ಯಾಹ್ನ 12.30ರಿಂದ ಶ್ರೀ ದೇವರಿಗೆ ಮಹಾಪೂಜೆ, 12.45 ರಿಂದ ಶ್ರೀ ವರಮಹಾಲಕ್ಷ್ಮೀ ಪೂಜಾ ಮಹಾಮಂಗಳಾರತಿ, ಪ್ರಸಾದ ವಿತರಣೆ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮ 

ಬೆಳಿಗ್ಗೆ ಗಂ.11ರಿಂದ ಧಾರ್ಮಿಕ ಸಭಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಪಡುಮಲೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ  ಸತೀಶ್ ರೈ ಕಟ್ಟಾವುರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವರಮಹಾಲಕ್ಷ್ಮಿ ಪೂಜಾ ಸಮಿತಿ ಗೌರವಾಧ್ಯಕ್ಷೆ  ವೀಣಾ ಶ್ರೀನಿವಾಸ ಭಟ್ ಚಂದುಕೂಡ್ಲು ದೀಪ ಪ್ರಜ್ವಲನೆ ಮಾಡಲಿದ್ದಾರೆ.

ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ನಮಿತ ಕೆ.ಕೆ, ಧಾರ್ಮಿಕ ಉಪನ್ಯಾಸ ಮಾಡಲಿದ್ದಾರೆ. ಗೌರವ ಉಪಸ್ಥಿತರಾಗಿ ಶ್ರೀ ಕ್ಷೇತ್ರ ಪಡುಮಲೆ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮನೋಜ್ ರೈ ಪೇರಾಲು, ಬಡಗನ್ನೂರು ಸ.ಸ.ಉ.ಹಿ.ಪ್ರಾ. ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ  ನಾರಾಯಣ ರೈ ಕಟ್ಟೆ, ಕುದ್ಮಾಡಿ,  ಈಶ್ವರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರ ನಿವೖತ್ತ ಹಿರಿಯ ಆರೋಗ್ಯಕರ್ತೆ ಪದ್ಮಾವತಿ ಬಿ ರೈ ಕುದ್ಮಾಡಿ,  ಪೂಜಾ ಸಮಿತಿ ಆಧಕ್ಷೆ ವಾಣಿಶ್ರೀ ಪಡುಮಲೆ ಭಾಗವಹಿಸಲಿದ್ದಾರೆ. 

LEAVE A REPLY

Please enter your comment!
Please enter your name here