ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ ಹಾಗು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ, ಮತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ದೇವಳದ ನಟರಾಜ ವೇದಿಕೆಯಲ್ಲಿ ಆ.8ಕ್ಕೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಜರುಗಲಿದೆ. ಪೂಜೆಗೆ ಪ್ರಸಾದ ರೂಪದಲ್ಲಿ ಸೀರೆ ವಿತರಣೆಯು ನಡೆಯಲಿದೆ. ಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ವೇ ಮೂ ಹರಿಪ್ರಸಾದ್ ವೈಲಾಯ ಅವರ ಪೌರೋಹಿತ್ಯದಲ್ಲಿ ಪೂಜೆ ನಡೆಯಲಿದೆ. ಮಧ್ಯಾಹ್ನ 11 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸಮರ್ಪಣ ಮಹಿಳಾ ಸೇವಾ ಸಂಸ್ಥೆಯ ಗೌರವಾಧ್ಯಕ್ಷೆ ಮತ್ತು ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಶ್ರೀನಿವಾಸ ಕಾಲೇಜಿನ ಉಪನ್ಯಾಸಕಿ ಡಾ.ವೀಣಾ ಸಂತೋಷ್ ರೈ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ..ಶ್ರೀನಿವಾಸ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ರಮ್ಯಾ ರಾಜರಾಮ್, ರಕ್ಷಾ ಉಜ್ವಲ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಕೃಷ್ಣವೇಣಿ ಗೌರವ ಉಪಸ್ಥಿತಿಯಲ್ಲಿರುತ್ತಾರೆ. ಸಭಾ ಕಾರ್ಯಕ್ರಮದ ಬಳಿಕ ಮಹಾಪೂಜೆ ನಡೆಯಲಿದೆ. ಬಳಿಕ ಅನ್ನಪ್ರಸಾದ ವಿತರಣೆ ನಡೆಯಲಿದೆ ಎಂದು ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ ತಿಳಿಸಿದ್ದಾರೆ.