ಪುತ್ತೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಧರ್ಮಧರ್ಮಗಳ ನಡುವೆ ವೈಮನಸ್ಸು ಮತ್ತು ದ್ವೇಷ ಉಂಟು ಮಾಡುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿರುವುದಾಗಿ ಆರೋಪಿಸಿ ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಅಶ್ರಫ್ ಬಾವು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಶ್ರಫ್ ಬಾವು, “ನಾವು ಭಾರತೀಯ ಸೇನೆ” ಎಂಬ ‘ಫೇಸ್ಬುಕ್ ಪೇಜ್ ನಲ್ಲಿ ಪ್ರಸಾರವಾದ ಪೋಸ್ಟ್ ಗೆ ಸಂಬಂಧಿಸಿ ಪೊಲೀಸ್ ಇಲಾಖೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದೆ. ಈ ಮೂಲಕ ಸ್ಪಷ್ಟಪಡಿಸುವುದೇನೆಂದರೆ ಆ ಪೇಜ್ ನ ಆಡ್ಮಿನ್ ನಾನಲ್ಲ, ನನಗೂ ಆ ಪೇಜ್ ಗೂ ಯಾವುದೇ ಸಂಬಂಧವಿಲ್ಲ. ಆಧುನಿಕ ತಂತ್ರಜ್ಞಾನ ಇರುವ ಪೊಲೀಸ್ ಇಲಾಖೆ ಸರಿಯಾದ ತನಿಖೆ ನಡೆಸದೆ ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದು, ಪೊಲೀಸರ ನಡೆಯ ವಿರುದ್ಧ ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಾಗುವುದು’ ಎಂದವರು ತಿಳಿಸಿದ್ದಾರೆ.