ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನ, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ದ್ವಿತೀಯ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ದೇವಸ್ಥಾನದ ವಠಾರದಲ್ಲಿ ಆ.8ರಂದು ನಡೆಯಿತು.

ಅರ್ಚಕರು ಪೂಜಾ ಕೈಂಕರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಊರ ಹತ್ತು ಸಮಸ್ತರು, ಗೌರವಾಧ್ಯಕ್ಷ, ಅಧ್ಯಕ್ಷ, ಪದಾಧಿಕಾರಿಗಳು, ಸರ್ವಸದಸ್ಯರು, ಭಕ್ತಾಧಿಗಳು ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.