ಕಾಣಿಯೂರು: ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ವೀರಮಂಗಲದಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ ಚದುರಂಗ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದುಕೊಂಡು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಶ್ರೀರತ್ ವಿ ರೈ (8ನೇ) ಪ್ರಥಮ, ಸಾಶ್ರಿತ್ ವಿ ರೈ (7 ನೇ) ದ್ವಿತೀಯ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಸನ್ನಿಧಿ ಜೆ ಎಚ್(8ನೇ) ತೃತೀಯ, ಸಮನ್ವಿ ಪಿ ಡಿ (7 ನೇ) ಚತುರ್ಥ ಸ್ಥಾನವನ್ನು ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಪ್ರೌಢ ಶಾಲಾ ಬಾಲಕರ ವಿಭಾಗದಲ್ಲಿ ಶಮಂತ್ (9ನೇ ) ತೃತೀಯ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಸಾನ್ವಿಕ ಎಚ್ (9ನೇ) ಪ್ರಥಮ ಸ್ಥಾನ, ಹಾಗೆಯೇ ಕನ್ನಡ ಮಾಧ್ಯಮದ ತೃಷಾ (10ನೇ) ತೃತೀಯ ಸ್ಥಾನಗಳನ್ನು ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಮಾರ್ಗದರ್ಶನ ನೀಡಿರುತ್ತಾರೆ.