ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ, ಪುತ್ತೂರು ಹಾಗೂ ಬಿಲ್ಲವ ಮಹಿಳಾ ವೇದಿಕೆ ಪುತ್ತೂರು ಇದರ ಆಶ್ರಯದಲ್ಲಿ ಆ.10 ರಂದು ‘ಆಟಿದ ಪೊಲಪು’ ಕಾರ್ಯಕ್ರಮವು ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳು ಸಭಾಭವನದಲ್ಲಿ ಜರಗಲಿದೆ.
ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪುತ್ತೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಪುಷ್ಪಾವತಿ ಕೇಕುಡೆ ಅಧ್ಯಕ್ಷತೆ ವಹಿಸಲಿದ್ದಾರೆ. ರಾಮಕುಂಜ ಶ್ರೀ ರಾಮಕುಂಜೇಶ್ವರ ಶಾಲೆಯ ಗುರು ಶ್ರೀಮತಿ ಸರಿತಾ ಜನಾರ್ದನರವರು ಆಟಿದ ಸಂದೇಶ ನೀಡಲಿದ್ದಾರೆ. ಅತಿಥಿಗಳಾಗಿ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ವಿಜಯಕುಮಾರ್ ಸೊರಕೆ, ಜಯಂತ್ ನಡುಬೈಲು, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಜಿತ್ ಕುಮಾರ್ ಪಾಲೇರಿರವರು ಭಾಗವಹಿಸಲಿದ್ದಾರೆ.
ಮಧ್ಯಾಹ್ನದ ಬಳಿಕ ಮಕ್ಕಳಿಂದ ಹಾಗೂ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿದೆ. ಕಾರ್ಯಕ್ರಮಕ್ಕೆ ಪುತ್ತೂರು ಬಿಲ್ಲವ ಸಂಘ, ಬಿಲ್ಲವ ಗ್ರಾಮ ಸಮಿತಿ, ಯುವವಾಹಿನಿ ಪುತ್ತೂರು, ಕಡಬ, ಉಪ್ಪಿನಂಗಡಿ ಘಟಕ, ಪುತ್ತೂರು ಬಿಲ್ಲವ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸಹಕರಿಸಲಿದ್ದಾರೆ. ಮಧ್ಯಾಹ್ನ ಆಟಿದ ಆಟಿಲ್ ನಲ್ಲಿ 25ಕ್ಕೂ ಮಿಕ್ಕಿ ವಿವಿಧ ತಿಂಡಿ-ತಿನಸುಗಳನ್ನು ಉಣಬಡಿಸಲಿದೆ ಎಂದು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಪುಷ್ಪಾವತಿ ಕೇಕುಡೆ, ಕಾರ್ಯದರ್ಶಿ ಗೀತಾ ರಮೇಶ್, ಸಂಚಾಲಕ ಚಂದಪ್ಪ ಪೂಜಾರಿ ಕಾಡ್ಲ, ಉಪಾಧ್ಯಕ್ಷರಾದ ಶ್ವೇತಾ ಹಾ ಶಕುಂತಲ, ಜೊತೆ ಕಾರ್ಯದರ್ಶಿ ಪ್ರೀತಿಕಾ, ಕೋಶಾಧಿಕಾರಿ ಪ್ರೇಮಲತಾರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.