ಉಪ್ಪಿನಂಗಡಿ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ವಿಲಾಸ್ ಅವರು ರಾಷ್ಟ್ರೀಯ ಸೀನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ಗೆ ಆಯ್ಕೆಯಾಗಿದ್ದಾರೆ.
ಆ.16ರಿಂದ 18ರವರೆಗೆ ಜಾರ್ಖಂಡ್ನ ರಾಂಚಿಯಲ್ಲಿ ನಡೆಯಲಿರುವ 48ನೇ ರಾಷ್ಟ್ರೀಯ ಸೀನಿಯರ್ ತ್ರೋಬಾಲ್ ಚಾಂಪಿಯನ್ಶಿಪ್ ನಲ್ಲಿ ಅವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ಈ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಟೂರ್ನಿಯಲ್ಲಿ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದರು. ಇವರ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ಸಿಡಿಸಿ ಸದಸ್ಯರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.