ಪುತ್ತೂರು: ಸರ್ವೆ ಗ್ರಾಮದ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮತ್ತು ಶ್ರೀ ವರಮಹಾಲಕ್ಷ್ಮಿ ಪೂಜಾ ಮಹಿಳಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಶ್ರೀವರಮಹಾಲಕ್ಷ್ಮೀ ಪೂಜೆ ಆ.8ರಂದು ಬೆಳಿಗ್ಗೆ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರಗಿತು.
ಅರ್ಚಕ ಸುಬ್ರಾಯ ನಿಡ್ವಣ್ಣಾಯ ಬಂಬಿಲರವರ ನೇತೃತ್ವದಲ್ಲಿ ಬೆಳಿಗ್ಗೆ ಶ್ರೀ ವರಮಹಾಲಕ್ಷ್ಮೀ ಪೂಜೆ ಆರಂಭಗೊಂಡು ಮಧ್ಯಾಹ್ನ ಮಂಗಳಾರತಿ ನಡೆಯಿತು. ಶಿಕ್ಷಕಿ ವೀಣಾ ಸರಸ್ವತಿ ನಿಡ್ವಣ್ಣಾಯ ಪುತ್ತೂರು ಇವರಿಂದ ಧಾರ್ಮಿಕ ಪ್ರವಚನ ನಡೆಯಿತು. ದೇವಳದ ಪ್ರಧಾನ ಅರ್ಚಕರಾದ ಎಲಿಯ ನಾಗೇಶ ಕಣ್ಣಾರಾಯರವರ ನೇತೃತ್ವದಲ್ಲಿ ಮಧ್ಯಾಹ್ನ ಎಲಿಯ ಶ್ರೀ ವಿಷ್ಣುಮೂರ್ತಿ ದೇವರಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆಯ ಬಳಿಕ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಊರ ಪರವೂರ ನೂರಾರು ಭಕ್ತಾಧಿಗಳು ಅನ್ನಪ್ರಸಾದ ಸ್ವೀಕರಿಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರುಗಳು ಹಾಗೇ ಶ್ರೀ ವರಮಹಾಲಕ್ಷ್ಮೀ ಪೂಜಾ ಮಹಿಳಾ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರುಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.