ಪುತ್ತೂರು:ಈಶ್ವರಮಂಗಲ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ.7ರಂದು ನಡೆದ ವಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಸುಧನ್ವ ಭಟ್ ಇವರು 14ರ ವಯೋಮಾನದ ಬಾಲಕರ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 17ರ ವಯೋಮಾನದ ಬಾಲಕರ ಚದುರಂಗ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಶ್ರೀರಾಮ ಶರ್ಮ ಚತುರ್ಥ ಸ್ಥಾನವನ್ನು ಪಡೆದು ತಾಲೂಕು ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.