
ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಪುತ್ತೂರು ಮತ್ತು ಬಿಲ್ಲವ ಮಹಿಳಾ ವೇದಿಕೆ ಪುತ್ತೂರು ಇದರ ಆಶ್ರಯದಲ್ಲಿ ಆ.8 ರಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಂಗಣದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ಜರಗಿತು.






ಅರ್ಚಕರಾದ ನವೀನ್ ಶಾಂತಿ ಅಡ್ಯಾಲು ಅಜಿಲಮೊಗರು ಇವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನ ನಡೆಯಿತು. ಈ ಸಂದರ್ಭದಲ್ಲಿ ಮಹಿಳಾ ವೇದಿಕೆಯ ಸದಸ್ಯರಿಂದ ಭಜನೆ, ಮಹಾಪೂಜೆ ಬಳಿಕ ಅನ್ನಸಂತರ್ಪಣೆ ಜರಗಿತು.
ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕಾರ್ಯದರ್ಶಿ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್, ಉಪಾಧ್ಯಕ್ಷ ಚಿದಾನಂದ ಸುವರ್ಣ, ಕೋಶಾಧಿಕಾರಿ ಜನಾರ್ದನ ಪೂಜಾರಿ ಪದಡ್ಕ, ಜೊತೆ ಕಾರ್ಯದರ್ಶಿ ಪುರುಷೋತ್ತಮ ಬರೆಂಬೆಟ್ಟು, ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ನಿರ್ಗಮಿತ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಕೋಲಾಡಿ, ಸಂಚಾಲಕ ಅಶೋಕ್ ಕುಮಾರ್ ಪಡ್ಪು, ಸದಸ್ಯರಾದ ಮೋಹನ್ ತೆಂಕಿಲ, ಮಾಧವ ಸಾಲಿಯಾನ್ ಕುರೆಮಜಲು, ವಿಮಲ ಸುರೇಶ್, ಮಾಜಿ ಸದಸ್ಯರಾದ ಸಜ್ಜನ್ ಕುಮಾರ್, ರಾಜೇಶ್ ಆರ್ಲಪದವು, ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಪುಷ್ಪಾವತಿ ಕೇಕುಡೆ, ಪುತ್ತೂರು ಬಿಲ್ಲವ ಮಹಿಳಾ ವೇದಿಕೆ ಕಾರ್ಯದರ್ಶಿ ಗೀತಾ ರಮೇಶ್, ಉಪಾಧ್ಯಕ್ಷರಾದ ಶಕುಂತಲಾ, ಶ್ವೇತ, ಜೊತೆ ಕಾರ್ಯದರ್ಶಿ ಪ್ರೀತಿಕಾ, ಕೋಶಾಧಿಕಾರಿ ಪ್ರೇಮಲತಾ, ಬಿಲ್ಲವ ಮಹಿಳಾ ವೇದಿಕೆಯ ಮಾಜಿ ಪದಾಧಿಕಾರಿಗಳು, ಗ್ರಾಮ ಸಮಿತಿ ಅಧ್ಯಕ್ಷರು, ವಲಯ ಸಂಚಾಲಕರ ಸಹಿತ ನೂರಾರು ಭಕ್ತರು ಧಾರ್ಮಿಕ ಕಾರ್ಯದಲ್ಲಿ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.