ನಿವೃತ್ತ ಅಂಗನವಾಡಿ ಕಾರ್ಯಕರ್ತೆ ರೋಹಿಣಿ ಅಬೀರರವರಿಗೆ ಸನ್ಮಾನ
ಕಾಣಿಯೂರು: ಕಾಣಿಯೂರು ಕಣ್ವರ್ಷಿ ಮಹಿಳಾ ಮಂಡಲದ ಆಶ್ರಯದಲ್ಲಿ 9ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ 8ರಂದು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು. ಅರ್ಚಕ ಚಿದಾನಂದ ಉಪಾಧ್ಯಾಯ ಕಲ್ಪಡ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಸನ್ಮಾನ:
ಕಾರ್ಯಕ್ರಮದಲ್ಲಿ ನಿವೃತ್ತ ಕಾಣಿಯೂರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ರೋಹಿಣಿ ಸುವರ್ಣ ಅಬೀರ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಣಿಯೂರು ಶ್ರೀ ಮಠದ ವ್ಯವಸ್ಥಾಕರಾದ ಶ್ರೀನಿಧಿ ಆಚಾರ್, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ, ಅಧ್ಯಕ್ಷ ಪುಟಣ್ಣ ಗೌಡ ಮುಗರಂಜ, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಗೌರವಾಧ್ಯಕ್ಷ ಕೃಷ್ಣಪ್ರಸಾದ್ ಭಟ್ ಕಟ್ಟತ್ತಾರು, ಕಾಣಿಯೂರು ಸ.ಹಿ.ಪ್ರಾ. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಅನಿಲ, ಕಾಣಿಯೂರು ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ಕೃಷ್ಣ ಚೆಟ್ಟಿಯಾರು ಮುಗರಂಜ, ಮಹಿಳಾ ಮಂಡಲ ಅಧ್ಯಕ್ಷೆ ಮಮತಾ ಲೋಕೇಶ್ ಅಗಳಿ, ಕಾರ್ಯದರ್ಶಿ ನಾಗವೇಣಿ ಬೆದ್ರಾಜೆ ಹಾಗೂ ಸದಸ್ಯರು ಉಪಸ್ಥಿತರಿದ್ದರು.