ಕಾಣಿಯೂರು: ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.8ರಂದು ನಡೆಯಿತು.
ಪುರೋಹಿತ್ ಸಚಿನ್ ಶರ್ಮ ಅವರು ವಿವಿಧ ಪೂಜಾ ಕಾರ್ಯಕ್ರಮ ನೆರರವೇರಿಸಿದರು. ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಕುಕ್ಕಟ್ಟೆ ಕ್ಷೇತ್ರದ ಅರ್ಚಕರಾದ ಬಾಲಕೃಷ್ಣ ಪುರೋಹಿತ್, ಅನುವಂಶೀಯ ಮೊಕ್ತೇಸರ ಚಿನ್ನಯ್ಯ ಆಚಾರ್ಯ ಕುಕ್ಕಟ್ಟೆ, ಆಡಳಿತ ಸಮಿತಿ ಅಧ್ಯಕ್ಷ ಬಾಲಕೃಷ್ಣ ಮರೋಳಿ, ಕಾರ್ಯದರ್ಶಿ ಕಾರ್ಯದರ್ಶಿ ಪುರುಷೋತ್ತಮ ಆಚಾರ್ಯ ಕುಕ್ಕಟ್ಟೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು, ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ಧೀರಾಜ್ ಮಾಲೆತ್ತಾರು ಹಾಗೂ ಆಡಳಿತ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು,ಭಕ್ತರು ಉಪಸ್ಥಿತರಿದ್ದರು.