ಕಡಬ: ಆತೂರು ಶ್ರೀ ಸದಾಶಿವ ದೇವಸ್ಥಾನ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಕಡಬ: ಕಡಬ ತಾಲೂಕು ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನದ ಸಭಾಭವನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ದೇವಳದ ವ್ಯವಸ್ಥಾಪನ ಸಮಿತಿ ಸಹಯೋಗದೊಂದಿಗೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.

ದೇವಳದ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ ನೇತೃತ್ವದಲ್ಲಿ ಪೂಜಾ ವಿಧಿವಿಧಾನ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಕೊಯಿಲ ಗ್ರಾ.ಪಂ ಮಾಜಿ ಅಧ್ಯಕ್ಷೆ ಹೇಮಾಮೋಹನ್ ದಾಸ್ ಶೆಟ್ಟಿ ಧಾರ್ಮಿಕ ಭಾಷಣ ಮಾಡಿದರು. ಪೂಜಾ ಸಮಿತಿ ಅಧ್ಯಕ್ಷೆ ಸಾವಿತ್ರಿ ಸಂಜೀವ ಸುದೆಂಗಳ ಅಧ್ಯಕ್ಷತೆ ವಹಿಸಿದ್ದರು. ಕೊಯಿಲ ಗ್ರಾ.ಪಂ ಅಧ್ಯಕ್ಷೆ ಪುಷ್ಪಾಶುಭಾಷ್ ಶೆಟ್ಟಿ,‌ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನೀರಜ್ ಕುಮಾರ್ ರೈ ಶುಭಹಾರೈಸಿದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಸುಜಾತ ಶೆಟ್ಟಿ ಸ್ವಾಗತಿಸಿದರು. ಮೀನಾಕ್ಷಿ ಎಂ ವಂದಿಸಿದರು. ಪೂಜಾ ಸಮಿತಿ ಕಾರ್ಯದರ್ಶಿ ನಯನ ಯತೀಶ್ ಗುಂಡಿಜೆ ನಿರೂಪಿಸಿದರು.

LEAVE A REPLY

Please enter your comment!
Please enter your name here