ನಿಡ್ಪಳ್ಳಿ ದೇವಾಲಯದಲ್ಲಿ 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ

0

ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ, ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ನಿಡ್ಪಳ್ಳಿ ಇವುಗಳ ಜಂಟಿ ಆಶ್ರಯದಲ್ಲಿ 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ಆ.8ರಂದು ವೇದ ಮೂರ್ತಿ ಶ್ರೀ ದಿನೇಶ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ನಡೆಯಿತು.

ಬೆಳಿಗ್ಗೆ  ಪೂಜೆ ಪ್ರಾರಂಭವಾಗಿ ಮಧ್ಯಾಹ್ನ  ಮಹಾ ಮಂಗಳಾರತಿ ನಂತರ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಶ್ರೀ ಶಾಂತದುರ್ಗಾ ಮಹಿಳಾ ಭಜನಾ ಸಂಘ ನಿಡ್ಪಳ್ಳಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗೇಶ ಗೌಡ ಪುಳಿತ್ತಡಿ ಮತ್ತು ಸರ್ವ ಸದಸ್ಯರು ಹಾಗೂ ಪೂಜಾ ಸಮಿತಿ ಅಧ್ಯಕ್ಷೆ ಭಾರತಿ ಶಿವಪ್ಪ ಪೂಜಾರಿ ನುಳಿಯಾಲು ಮತ್ತು ಪದಾಧಿಕಾರಿಗಳು ಹಾಗೂ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here