ಪುತ್ತೂರು: ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ, ಗೌಡ ಯುವ ಸಂಘ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಮತ್ತು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಆ.8 ರಂದು ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಅರ್ಚಕ ರವಿ ನೆಲ್ಲಿತ್ತಾಯ ಅವರ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಮಹಾಪೂಜೆಯ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯ ಮುಖ್ಯಗುರು ಪುಷ್ಪಾವತಿ ಯಸ್ ಧಾರ್ಮಿಕ ಉಪನ್ಯಾಸ ನೀಡಿದರು .
ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಯುವ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್‌ನ ಅಧ್ಯಕ್ಷ ಡಿ.ವಿ. ಮನೋಹರ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ,ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಕೆ ಗೌಡ, ಕಾರ್ಯದರ್ಶಿ ಸಂಧ್ಯಾ ಶಶಿಧರ್, ಖಜಾಂಜಿ ರತ್ನಾವತಿ ಕಿಶೋರ್ ಉಪಸ್ಥಿತಿದ್ದರು.