ಪುತ್ತೂರು: ಪುತ್ತೂರು ಬೈಪಾಸ್ ರಸ್ತೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ದರ್ಬೆ ಪರ್ಲಡ್ಕ ಸಮೀಪ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಆ.8ರಂದು ನಡೆದಿದೆ.
ಸುಳ್ಯ ಕಡೆ ಹೋಗುತ್ತಿದ್ದ ಮಾರುತಿ ಆಲ್ಟೋ 800 ಕಾರು ಮತ್ತು ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಮಾರುತಿ ಸೆಲೋರಿಯೋ ಕಾರು ನಡುವೆ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಬೆಲೂನ್ ತೆರೆದುಕೊಂಡಿದ್ದು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಪೊಲೀಸರು ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ.