ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

0

ಪುತ್ತೂರು: ವರಮಹಾಲಕ್ಷ್ಮೀ ಪೂಜಾ ಆಚರಣಾ ಸಮಿತಿ ಮತ್ತು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ಮಜಲುಮಾರು ಇದರ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯು ಆ.8ರಂದು ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಿತು.


ಕ್ಷೇತ್ರದ ಅರ್ಚಕ ಪ್ರಸಾದ್ ಅಡಿಗರವರ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಕಲಶ ಪ್ರತಿಷ್ಠೆ, ಸಂಕಲ್ಪ, ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಪುರುಷರಕಟ್ಟೆ ಶ್ರೀದುರ್ಗಾ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಪೂಜಾ ಸೇವೆ ಸಲ್ಲಿಸಿದವರಿಗೆ ಪ್ರಸಾದದ ಜೊತೆಗೆ ರವಿಕೆ ಕಣ, ಬಲೆ ವಿತರಿಸಲಾಯಿತು. ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಸಾವಿರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here