ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾಯಿ ಕೃಷ್ಣನಗರ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 14ರ ವಯೋಮಾನದ ಚೆಸ್ ಪಂದ್ಯಾಟದಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ 8ನೇ ತರಗತಿಯ ಕುಮಾರಿ ಆದ್ಯಾ ಪ್ರಸಾದ್ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ ಎಂದು ಶಾಲಾ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ ಶಿಕ್ಷಕೇತರರು ತಿಳಿಸಿದ್ದಾರೆ.