ನೆಲ್ಯಾಡಿ: ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಹಾಗೂ ತಾಲೂಕು ಬಂಟರ ಸಂಘ ಪುತ್ತೂರು ಇದರ ಮಾರ್ಗದರ್ಶನದಲ್ಲಿ ವಲಯ ಬಂಟರ ಸಂಘ ನೆಲ್ಯಾಡಿ ಇದರ ಆಶ್ರಯದಲ್ಲಿ ನೆಲ್ಯಾಡಿ ಬಂಟ ಬಾಂಧವರ ಆಟಿಡೊಂಜಿ ಬಂಟೆರೆ ಸೇರಿಗೆ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಆ.10ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಪವೃಕ್ಷ ಸಹಕಾರಿ ಸೌಧದಲ್ಲಿ ನಡೆಯಲಿದೆ ಎಂದು ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ಪ್ರತಾಪಚಂದ್ರ ರೈ ಕುದ್ಮಾರುಗುತ್ತು, ಗೌರವಾಧ್ಯಕ್ಷ ವಿಶ್ವನಾಥ ಶೆಟ್ಟಿ ಶ್ರೀಮಾತಾ, ಕಾರ್ಯದರ್ಶಿ ಮಹಾಬಲ ಶೆಟ್ಟ ದೋಂತಿಲ, ಕೋಶಾಧಿಕಾರಿ ಆನಂದ ಶೆಟ್ಟಿ ಇಚ್ಲಂಪಾಡಿ ಮತ್ತು ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೂರ್ವಾಹ್ನ 10 ರಿಂದ 11ರ ತನಕ ಆರ್ಯಭಟ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ವಿಶ್ವನಾಥ ಶೆಟ್ಟಿ ಇವರ ನೇತೃತ್ವದಲ್ಲಿ ಬಂಟ ಬಾಂಧವರಿಗೆ ಒಳಾಂಗಣ ಆಟೋಟ ಸ್ಪರ್ಧೆ, ಮನೋರಂಜನಾ ಕಾರ್ಯಕ್ರಮ ನಡೆಯಲಿದೆ. ಪೂರ್ವಾಹ್ನ 11.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ವಲಯದ ಹಿರಿಯ ಬಂಟ ಬಾಂಧವರಾದ ವಿಠಲ ಮಾರ್ಲ ರಾಮನಗರ ಉದ್ಘಾಟಿಸಲಿದ್ದಾರೆ. ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ತುಕ್ರಪ್ಪ ಶೆಟ್ಟಿ ನೂಜೆ ಸಾಧಕರಿಗೆ ಸನ್ಮಾನ ಮಾಡಲಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾಧರ ಶೆಟ್ಟಿ ಅಮ್ಮೆತ್ತಿಮಾರುಗುತ್ತು, ಬೆಂಗಳೂರು ಒನ್ ಸೇವಿಂಗ್ಸ್ ಬ್ಯಾಂಕ್ ಆಫ್ ಇಂಡಿಯಾದ ಪ್ರತೀಕ್ಷ್ ರೈ ಕೊಣಾಲುಗುತ್ತು ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ.
ದೈವರಾಧಕರು ಮತ್ತು ದೈವರಾಧನೆಯ ಮಧ್ಯಸ್ಥರಾದ ರಘುನಾಥ ರೈ ಹಾರ್ಪಳಗುತ್ತು, 10ನೇ ತರಗತಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಧನ್ವಿ ಶೆಟ್ಟಿ ದೋಂತಿಲ ಅವರಿಗೆ ಸನ್ಮಾನ ನಡೆಯಲಿದೆ. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಮಹಿಳಾ ಬಂಟರ ವಿಭಾಗದ ಕಾರ್ಯದರ್ಶಿ ಕುಸುಮ ಪಿ.ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಇದರ ಪುತ್ತೂರು ತಾಲೂಕು ಸಮಿತಿ ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಕೋಟಿ-ಚೆನ್ನಯ್ಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಎನ್. ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.