ಹಿರೆಬಂಡಾಡಿ: ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಶಿವನಗರ, ಮಂಜುಶ್ರೀ ಸೇವಾ ಟ್ರಸ್ಟ್, ಮಂಜುಶ್ರೀ ಭಜನಾ ಮಂದಿರ ಶಿವನಗರ ಇದರ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ಆ.೮ರಂದು ಹಿರೆಬಂಡಾಡಿ ಮಂಜುಶ್ರೀ ಭಜನಾಮಂದಿರದಲ್ಲಿ ನಡೆಯಿತು.
ಉಳತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ತೋಳ್ಪಾಡಿತ್ತಾಯರ ನೇತೃತ್ವದಲ್ಲಿ ಕಲಶ ಪ್ರತಿಷ್ಠೆ, ಸಂಕಲ್ಪ, ಭಜನೆ,ಮಧ್ಯಾಹ್ನ ಮಹಾಪೂಜೆ, ಪ್ರಸಾದವಿತರಣೆ ನಡೆಯಿತು. ನಂತರ ಅನ್ನಸಂತರ್ಪಣೆ ನಡೆಯಿತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ತಾ.ಪಂ.ಮಾಜಿ ಸದಸ್ಯ ಉಮೇಶ್ ಶೆಣೈ, ಹಿರೆಬಂಡಾಡಿ ಗ್ರಾ.ಪಂ.ಅಧ್ಯಕ್ಷ ಸದಾನಂದ ಶೆಟ್ಟಿ ಅಡೆಕ್ಕಲ್, ಗ್ರಾ.ಪಂ.ಸದಸ್ಯರು, ಭಜನಾ ಮಂಡಳಿ ಸದಸ್ಯರು, ಸೇವಾ ಟ್ರಸ್ಟ್‌ನ ಸದಸ್ಯರು, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಸೌಮ್ಯ ಹೆನ್ನಾಳ, ಕಾರ್ಯದರ್ಶಿ ಮಮತಾ ಕಜೆ ಮತ್ತು ಪದಾಧಿಕಾರಿಗಳು, ಸದಸ್ಯರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಕಸ್ತೂರಿ ಹೆನ್ನಾಳ ಸ್ವಾಗತಿಸಿ, ವಂದಿಸಿದರು.