ಪುತ್ತೂರು: ಸಂಪ್ಯ ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.8ರಂದು ನಡೆಯಿತು.
ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯರವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನೆರವೇರಿತು. ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ನೂರಾರು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
