ಈಶ್ವರಮಂಗಲ: ಈಶ್ವರಮಂಗಲ ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ.9ರಂದು ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು. ಮುಖ್ಯ ಅತಿಥಿ ಶಾಲಾ ಹಿರಿಯ ವಿದ್ಯಾರ್ಥಿ ಹರಿಪ್ರಸಾದ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ರಕ್ಷಾಬಂಧನ ಎನ್ನುವುದು ಒಂದು ಭಾಂದವ್ಯ,ಭಾವೈಕ್ಯ,ರಕ್ಷಣೆಯ ಸಂಕೇತ. ಇದು ಪುರಾಣ ಕಾಲದ ಇತಿಹಾಸದಿಂದಲೇ ಉಲ್ಲೇಖನಿಯವಾಗಿದೆ ಎಂದರು.
ಶಾಲಾ ಪ್ರಾಂಶುಪಾಲ ಕೆ ಶಾಮಣ್ಣ ಅಧ್ಯಕ್ಷೀಯ ನುಡಿಗಳನ್ನಾಡಿದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸೌಮ್ಯ ಎ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪರಸ್ಪರ ರಾಖಿ ಕಟ್ಟುವುದರ ಮೂಲಕ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಡಿ ಕೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಹಂಸಿನಿ ಸ್ವಾಗತಿಸಿ, ರಕ್ಷಾ ಬಿ ಆರ್ ವಂದಿಸಿದರು. ಶಿಕ್ಷಕಿ ಶ್ವೇತ ಕೆ ಎನ್ ಕಾರ್ಯಕ್ರಮ ನಿರೂಪಿಸಿದರು.