ನೆಲ್ಯಾಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೊಳಪಟ್ಟ ಕಾಂಚನ ಶ್ರೀ ಲಕ್ಷ್ಮೀ ನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್ ಮತ್ತು ಗೈಡ್ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಆ.6ರಂದು ನಡೆಯಿತು.
ಶಾಲಾ ಮುಖ್ಯಗುರು ಎ.ಲPಣ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಕೌಟ್-ಗೈಡ್ ವಿಭಾಗವು ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಬೇಕು. ಶಾಲೆಯಲ್ಲಿರುವ ಎಲ್ಲಾ ಸಂಘದ ಚಟುವಟಿಕೆಗಳು ವಾರ್ಷಿಕ ಕ್ರಿಯಾ ಯೋಜನೆ ಹೊಂದಿದ್ದು, ಅದರಂತೆಯೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಅತಿಥಿಯಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾಧಿಕಾರಿ ಶಶಿಧರ್ ಅವರು ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣ ಪಡೆಯುಲ್ಲಿ ಹೆತ್ತವರಿಗೆ ಸದಾ ವಿಧೇಯಕರಾಗಿದ್ದು, ಗೌರವ ನೀಡಬೇಕು. ಅಂತೆಯೇ ಶಾಲೆಯಲ್ಲಿ ನಡೆಯುವ ವಿವಿಧ ಸಂಘಗಳ ಕಾರ್ಯ ಚಟುವಟಿಕೆಗಳು ಯಶಸ್ವಿಯಾಗಿ ನಡೆಯಲಿ ಎಂದು ಹೇಳಿ ಶುಭ ಹಾರೈಸಿದರು.
ಇನ್ನೋರ್ವ ಅತಿಥಿ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಹಾಗೂ ಉಪ್ಪಿನಂಗಡಿ ಸ್ಥಳೀಯ ಸಂಸ್ಥೆಗಳ ಗೈಡ್ ಕಾರ್ಯದರ್ಶಿ ಪ್ರೇಮ ಮಾತನಾಡಿ, ಸ್ಕೌಟ್-ಗೈಡ್, ಬುಲ್ ಬುಲ್‌ಗಳ ಇತಿಹಾಸ, ಮಹತ್ವ ಹಾಗೂ ನಿಯಮಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಮಧುಶ್ರೀ ನೆಕ್ಕರೆ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಅಂತೆಯೇ ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಶಿಸ್ತು ಸಂಯಮ ಹಾಗೂ ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಂಸ್ಥೆಯ ವತಿಯಿಂದ ನೀಡಲಾದ ರೈನ್ ಕೋಟನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಕಾರ್ಯಕ್ರಮ ಶಾಲಾ ಸ್ಕೌಟ್ ಮಾಸ್ಟರ್ ವಂದನಾ ಎಂ.ಎಸ್ ಸ್ವಾಗತಿಸಿ, ಫ್ಲಾಕ್ ಲೀಡರ್ ಮಹಾಲಕ್ಷ್ಮೀ ಜೆ ವಂದಿಸಿದರು. ಗೈಡ್ ಮಾಸ್ಟರ್ ಹೇಮಾವತಿ ಎ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.