ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ರಕ್ಷಾ ಬಂಧನ

0

ಒಗ್ಗಟ್ಟಿನಲ್ಲಿ ಬಾಳಿದರೆ ಸಮಾಜದಲ್ಲಿ ಬದುಕಲು ಸುಲಭ – ಪ್ರಸನ್ನ ಕುಮಾರ್

ಪುತ್ತೂರು: ಭಾರತೀಯ ಸಂಸ್ಕೃತಿ, ಮೌಲ್ಯಗಳ ಗುರಿಯನ್ನು ಹೊಂದಿರುವ ಬನ್ನೂರು ಕೃಷ್ಣನಗರ ಅಲುಂಬುಡದಲ್ಲಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ ಆ.9ರಂದು ನಡೆಯಿತು.


ಕಾರ್ಯಕ್ರಮದ ಮುಖ್ಯ ಅತಿಥಿ ಪುಣಚದ ಶ್ರೀದೇವಿ ಶಾಲೆಯ ಶಿಕ್ಷಕ ಪ್ರಸನ್ನ ಕುಮಾರ್ ಎ ಎಸ್ ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ರಕ್ಷೆ ಎಂಬುದು ಒಗ್ಗಟ್ಟಿನ ಸಂದೇಶವಾಗಿದೆ. ರಕ್ಷಾಬಂಧನಕ್ಕೆ ಪೌರಾಣಿಕವಾಗಿ ಹಲವಾರು ಕಥೆಗಳಿವೆ, ಈ ರಕ್ಷಾಬಂಧನವು ರಾಷ್ಟ್ರೀಯ ಸ್ವಯಂ ಸೇವಕ ಸಂಘಗಳ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ ಬಂಧುಗಳ ಭಾವನೆಯ ಸಂದೇಶವೇ ರಕ್ಷಾ ಬಂಧನ. ಒಗ್ಗಟ್ಟಿನಲ್ಲಿ ಎಲ್ಲರೂ ಬಾಳಿದರೆ ಸಮಾಜದಲ್ಲಿ ಬದುಕಲು ಸುಲಭ ದಾರಿಯಾಗುತ್ತದೆ ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ ಎವಿಜಿ ಆಂಗ್ಲ ಮಾದ್ಯಮ ಶಾಲೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅವರು ಮಾತನಾಡಿ ರಕ್ಷೆ ಮತ್ತು ರಕ್ಷಣೆಯ ಮಹತ್ವದ ಬಗ್ಗೆ ಅರಿವನ್ನು ಮೂಡಿಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಸೌಮ್ಯಶ್ರೀ ಹೆಗಡೆ ರವರು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಮಕ್ಕಳಿಗೂ ರಕ್ಷೆಯನ್ನು ಕಟ್ಟುವ ಮೂಲಕ ರಕ್ಷಾ ಬಂಧನವನ್ನು ಆಚರಿಸಲಾಯಿತು. ವೇದಿಕೆಯಲ್ಲಿ ಶಾಲಾ ಸಂಚಾಲಕ ಎ ವಿ ನಾರಾಯಣ, ಶಾಲಾ ಆಡಳಿತ ಅಧಿಕಾರಿ ಗುಡ್ಡಪ್ಪ ಗೌಡ ಬಲ್ಯ ಹಾಗೂ ಶಾಲೆಯ ಉಪಾಧ್ಯಕ್ಷ ಉಮೇಶ್ ಮಲುವೇಲು, ಮತ್ತು ಶಾಲಾ ಪ್ರಾಂಶುಪಾಲ ಅಮರನಾಥ್ ಪಟ್ಟೆ ಹಾಗೂ ಶಾಲಾ ವಿದ್ಯಾರ್ಥಿ ನಾಯಕನಾದ ಕವನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಜೋಶ್ನಾ, ಅದ್ವಿತಿ ,ಸುವಿಕ್ಷ ಪ್ರಾರ್ಥಿಸಿದರು. ಶಿಕ್ಷಕಿಯರಾದ ಚಂದ್ರಿಕಾ ಸ್ವಾಗತಿಸಿ, ಪ್ರಕ್ಷುತ ಅತಿಥಿಗಳನ್ನು ಪರಿಚಯಿಸಿದರು. ಹರ್ಷಿತ ವಂದಿಸಿದರು. ಸವಿತಾ.ಕೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪೋಷಕ ಬಂಧು ಮಿತ್ರರು ,ಹಾಗೂ ಶಿಕ್ಷಕ -ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಗೆ ಸಿಹಿತಿಂಡಿಯನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here