ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ಶ್ರದ್ಧಾ ಕೇಂದ್ರದ ಸ್ವಚ್ಛತೆಯನ್ನು ದೋಂತಿಲ ಶ್ರೀ ಸುಬ್ರಹ್ಮಣ್ಯ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ದೇವಾಸ್ಥಾನದ ಆಡಳಿತ ಮೊಕ್ತೇಸರರಾದ ಸುಬ್ರಹ್ಮಣ್ಯ ಬಾಳ್ತಿಲ್ಲಾಯ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಸೇವಾಪ್ರತಿನಿಧಿ ನಮಿತಾ ಎಸ್ ಶೆಟ್ಟಿ, ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.
