ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕಿನ ನೆಲ್ಯಾಡಿ ವಲಯದ ಪುತ್ತಿಗೆ ಕಾರ್ಯಕ್ಷೇತ್ರದ ಕಳಪ್ಪಾರು ಒಕ್ಕೂಟದ ತ್ರೈಮಾಸಿಕ ಸಭೆಯು ಕಳಪ್ಪಾರು ಶಾಲೆಯಲ್ಲಿ ನಡೆಯಿತು.
ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ. ಅವರು ಯೋಜನೆಯ ಕುರಿತು ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ ಪಿ.ಎನ್., ಉಪಾಧ್ಯಕ್ಷ ನಾರಾಯಣ ಜಿ.ಸಿ., ಸೇವಾ ಪ್ರತಿನಿಧಿ ಪ್ರಿಯಲತಾ, ಕಳಪ್ಪಾರು ಶಾಲಾ ಎಸ್ಡಿಎಂಸಿ ಅಧ್ಯಕ್ಷ ಲೋಕೇಶ್ ಬಾಗಿಲುಗದ್ದೆ ಉಪಸ್ಥಿತರಿದ್ದರು.
ಕಳೆದ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು. ಸಂಘದ ಸದಸ್ಯ ಜನಾರ್ದನ ಎಸ್. ಸ್ವಾಗತಿಸಿದರು. ಪ್ರಿಯಾ ವಂದಿಸಿದರು. ಒಕ್ಕೂಟದ ಕಾರ್ಯದರ್ಶಿ ರುಕ್ಮಿಣಿ ನಿರೂಪಿಸಿದರು.